ಬೀದರ್: ಬೀದರ್ ಶಾಸಕ ರಹೀಂಖಾನ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ)ಯ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ರಾಜ್ಯದ ಕಾಂಗ್ರೆಸ್ ವರಿಷ್ಠರಲ್ಲಿ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅವರು, ರಹೀಂಖಾನ್ ಅವರಿಗೆ ಎರಡನೇ ಹಂತ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಕಾರ್ಯಕರ್ತರಿಗೆ ನಿರಾಶೆ ಉಂಟಾಗಿದೆ. ಹೀಗಾಗಿ ಅವರಿಗೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಕೋರಿದರು.
ಕಾಂಗ್ರೆಸ್ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಮಾದಿಗ ಸಮಾಜಕ್ಕೆ ಕೊಡಬೇಕು. ಸಮಾಜದ ಹಲವರು ಪಕ್ಷಕ್ಕಾಗಿ ದುಡಿಯುತ್ತಾ ಬಂದಿದ್ದೇವೆ. ನನ್ನನ್ನೂ ಸೇರಿ ಸಮಾಜದ ಯಾರಿಗಾದರೂ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ಧಮ್ಮದೀಪ, ಮಿಲ್ಟನ್, ಮಲ್ಲಿಕಾರ್ಜುನ ಬಂಗ್ಲೆ ಇದ್ದರು.
ದಾರಿ