ಬೀದರ್: ಜನ ಹಿತ ರೂರಲ್ ಆ್ಯಂಡ್ ಅರ್ಬನ್ ಡೆವಲೆಪ್‍ಮೆಂಟ್ ಸೋಸೈಟಿ ವತಿಯಿಂದ ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬುರ್ಗೆ ಅವರ ಜನ್ಮದಿನದ ನಿಮಿತ್ತ ಇಲ್ಲಿಯ ನಾವದಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ನೋಟ್‍ಪುಸ್ತಕ ಉಚಿತವಾಗಿ ವಿತರಿಸಲಾಯಿತು.
ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ನೋಟ್‍ಪುಸ್ತಕ ವಿತರಣೆ ಮಾಡಿದರು.
ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ವಜುರೆ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೋಟೆ, ಮುಖಂಡರಾದ ರೋಹಿತ್ ಔರಾದಕರ್, ಧಮ್ಮದೀಪ, ರತ್ನದೀಪ ಕಸ್ತೂರೆ, ಶಾಲೆಯ ಮುಖ್ಯಶಿಕ್ಷಕ, ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.
ದಾರಿ