ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಕಾಲಾವಕಾಶ ವಿಸ್ತರಣೆ
ಬೆಂಗಳೂರು, ಸೆ.17:
ರಾಜ್ಯದ ಪಡಿತರ ಚೀಟಿದಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಅಂಗಡಿಗಳ ಕಾರ್ಯನಿರ್ವಹಣಾ ಸಮಯವನ್ನು ಬದಲಾಯಿಸಲಾಗಿದೆ. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ.
ಇದರ ಜೊತೆಗೆ, ಪಡಿತರ ಚೀಟಿದಾರರಿಗೆ ಸಂಬಂಧಿಸಿದ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅಕ್ಟೋಬರ್ 20, 2026ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.
ತಾಂತ್ರಿಕ ದೋಷಗಳು ಹಾಗೂ ಸರ್ವರ್ ಸಮಸ್ಯೆಗಳಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದಿರುವ ಕಾರಣಕ್ಕೆ ಅರ್ಹ ಫಲಾನುಭವಿಗಳು ಪಡಿತರದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವರದಿ: ವಿಶ್ವ ಗಾಯಕ್ವಾಡ್
ದಾರಿ