Saturday, October 24, 2026
ನಿಮ್ಮ ವಿಶ್ವಾಸಾರ್ಹ ಸುದ್ದಿ ಮೂಲ

ದಲಿತ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಆರೋಪ: ಪಿಎಸ್‌ಐ ಅಮಾನತಿಗೆ ಆಗ್ರಹ

ದಲಿತ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಆರೋಪ: ಪಿಎಸ್‌ಐ ಅಮಾನತಿಗೆ ಆಗ್ರಹ



ಬೀದರ್: ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕು ಮಟ್ಟಾಳ ಗ್ರಾಮದಲ್ಲಿ ದಲಿತ ಸಂಘಟನೆ ಡಿ.ಎಸ್‌.ಎಸ್. (ಭೀಮವಾದ) ಕಾರ್ಯಕರ್ತ ರಾಜು ಚಲವಾದಿ ಅವರ ಮೇಲೆ ಗುಂಡಿನ ದಾಳಿ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೆ.23ರಂದು ಮನವಿ ಸಲ್ಲಿಸಲಾಗಿದೆ.

ಮನವಿಯಲ್ಲಿ ಉಲ್ಲೇಖಿಸಿರುವಂತೆ, ಸೆ.20ರಂದು ಮಟ್ಟಾಳ ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ವಿಚಾರಕ್ಕೆ ಸಂಬಂಧಿಸಿದಂತೆ ರಾಜು ಚಲವಾದಿ ಹಾಗೂ ಸಂಗಪ್ಪ ನಿಂಗಪ್ಪ ಪೂಜಾರಿ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ರಾಜು ಅವರಿಗೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ನಂತರ ಆರೋಪಿಯು ಲೈಸೆನ್ಸ್ ಹೊಂದಿದ ಬಂದೂಕಿನಿಂದ ಐದು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡ ರಾಜು ಚಲವಾದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಕುರಿತು ತುರ್ತು ಚಿಕಿತ್ಸೆ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಕರಣದಲ್ಲಿ ಕೋಲ್ಹಾರ ಪೊಲೀಸ್ ಠಾಣೆಯ ಪಿಎಸ್‌ಐ ಅಶೋಕ್ ನಾಯಕ ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಂಘಟನೆ ಆರೋಪಿಸಿದ್ದು, ಅವರನ್ನು ಅಮಾನತುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಬೀದರ್ ಜಿಲ್ಲಾ ಸಂಚಾಲಕ  ಸುನಿಲ್ ಸಂಗಮ ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ  ತುಕಾ ರಾಮ ತಾಳಮಗಿ, ಮುಂತ್ರೀಂಗಿಕರ್ ಕಾರ್ಯದರ್ಶಿ  ರಾಮ, ಸುನೀಲ ಭಾವಿಕಟ್ಟಿ — ಕಲಾವಿದರ ಸಂಘ ,  ಸತೀಶ ದಿಣ್ಣೆ, ಶ್ರೀ ಸುದರ್ಶನ್ ಧನಮಂತ,   ಪ್ರೇಮಕುಮಾರ  ಶೆರಿಕಾರ,ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ತರಿದ್ದರು