ಬೀದರ್: ಬೀದರ್ ಶಾಸಕ ರಹೀಂಖಾನ್ ಅವರಿಗೆ ರಾಜ್ಯದ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್
ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ದೆಹಲಿಯಲ್ಲಿ ಗುರುವಾರ ಲೋಕಸಭೆಯ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಖರ್ಗೆ ಅವರ ಕಚೇರಿ ಅಧಿಕಾರಿಗೆ ಮನವಿ ಪತ್ರದ ಪ್ರತಿ ನೀಡಿದರು
.
ಶಾಸಕ ರಹೀಂಖಾನ್ ಅವರು ಪೌರಾಡಳಿತ ಸಚಿವರಾಗಿ ದಾಖಲೆಯ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಏಳಿಗೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ
.
ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬೀದರ್ ನಗರದಲ್ಲಿ ರಸ್ತೆ ಡಾಂಬರೀಕರಣ ಮಾಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸ್ಥಳದಲ್ಲಿ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ
.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗದಿರುವುದರಿಂದ ಕ್ಷೇತ್ರದ ಮತದಾರರು, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ರಹೀಂಖಾನ್ ಅವರ ಬೆಂಬಲಿಗರ ಬೇಸರ ದೂರ ಮಾಡಲು ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ದಾರಿ